-->
ವೈದ್ಯರ ಸಲಹೆ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಬೇಡ

ವೈದ್ಯರ ಸಲಹೆ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಬೇಡ

ವೈದ್ಯರ ಸಲಹೆ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಬೇಡ

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ

ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವಯಂ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇದೆ.
ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹೆ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದು.


ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಮತ್ತು ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ರಕ್ತದಾನಿಗಳ ಪಟ್ಟಿ ಸಿದ್ಧ ಪಡಿಸಿಟ್ಟುಕೊಂಡು ಆವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ಉಡುಪಿ ಸಹಾಯಕ ಔಷಧಿ ನಿಯಂತ್ರಕರ ಪ್ರಕಟಣೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article