
ಐವರು ಸಚಿವರಿದ್ದರೂ ರಾಜ್ಯಕ್ಕೆ ಚೆಂಬು!
Tuesday, July 23, 2024
ಐವರು ಸಚಿವರಿದ್ದರೂ ರಾಜ್ಯಕ್ಕೆ ಚೆಂಬು!
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ ಸಚಿವರಿದ್ದರೂ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ. ಈ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಬಜೆಟ್ ನಲ್ಲಿ ರಾಜ್ಯಕ್ಕೆ ಖಾಲಿ ಚೆಂಬು ಸಿಕ್ಕಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್ ಮಂಡಿಸಿದ್ದಾರೆ.
ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ.
ಪ್ರಧಾನಮಂತ್ರಿ ತನ್ನ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಕಡೆಗಣಿಸಿದ್ದಾರೆ ಎಂದು ಸಿಎಂ ಆರೋಪಿಸಿದರು.