
ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ
Thursday, July 18, 2024
ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಸದ್ಯಕ್ಕೆ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಗುರುವಾರ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ವೀಡಿಯೊ ಕಾನ್ಫರೆನ್ಸ್ ಮೂಲಕ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು.
ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ.