ಉತ್ತಮ ಬಜೆಟ್
Wednesday, July 24, 2024
ಉತ್ತಮ ಬಜೆಟ್
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಉತ್ತಮ ಎಂದು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ವಿಶ್ಲೇಷಿಸಿದ್ದಾರೆ.
ವಿಕಸಿತ ಭಾರತದ ಸಂಕಲ್ಪದೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಮೂರನೇ ಅವಧಿಯ ಮೊದಲ ಬಜೆಟ್‌ನಲ್ಲಿ ಅನ್ನದಾತರು, ಮಹಿಳೆಯರು, ಯುವಶಕ್ತಿ ಮತ್ತು ಮಕ್ಕಳನ್ನು ಆದ್ಯತೆ ನೀಡಲಾಗಿದೆ.
ಬಜೆಟ್ ಸರ್ವವ್ಯಾಪಿ ಸರ್ವಸ್ಪರ್ಶಿಯಾಗಿದೆ.
ಹೆದ್ದಾರಿ, ಮೀನುಗಾರಿಕೆ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ವಲಯಗಳಿಗೂ ಆದ್ಯತೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.