ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಮರು ನೇಮಕ
Wednesday, July 3, 2024
ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಮರು ನೇಮಕ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮತ್ತೆ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದ್ದು ಮಂಗಳವಾರ ಅಧಿಕಾರ ವಹಿಸಿಕೊಂಡರು.
ಹಿರಿಯ ಐಎಎಸ್ ಅಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.
ನಿಂಬಾಳ್ಕರ್ ಪತ್ನಿ ಡಾ. ಅಂಜಲಿ ನಿಂಬಾಳ್ಕರ್ ಕಾರವಾರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಕಾರಣ ನಿಂಬಾಳ್ಕರ್ ಸ್ಥಾನಕ್ಕೆ ಸುರಳ್ಕರ್ ಅವರನ್ನು ನಿಯೋಜಿಸಲಾಗಿತ್ತು.