ಕೋಟೆ ಗ್ರಾ.ಪಂ. ವ್ಯಾಪ್ತಿಯ ಮನೆಗೆ ಹಾನಿ:- ಶಾಸಕ ಗುರ್ಮೆ ಭೇಟಿ
Monday, July 22, 2024
ಕೋಟೆ ಗ್ರಾ.ಪಂ. ವ್ಯಾಪ್ತಿಯ ಮನೆಗೆ ಹಾನಿ:- ಶಾಸಕ ಗುರ್ಮೆ ಭೇಟಿ
ಲೋಕಬಂಧುನ್ಯೂಸ್ ಡೆಸ್ಕ್, ಕಾಪು
ಭಾರೀ ಗಾಳಿ ಮಳೆಗೆ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿನೋಬಾನಗರದ ರಮೇಶ್ ಮನೆಗೆ ಹಾನಿ ಉಂಟಾಗಿದ್ದು, ಭಾನುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕ ಗುರ್ಮೆ ಸ್ಥಳದಲ್ಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮನೆ ಸಂಪೂರ್ಣ ಹಾನಿಯಾಗಿರುವ ಬಗ್ಗೆ ಶಿಫಾರಸು ಮಾಡಿ,, ಗರಿಷ್ಠ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಯೋಗೀಶ್, ಸದಸ್ಯ ರತ್ನಾಕರ್, ಮಾಜಿ ಸದಸ್ಯೆ ವಸಂತಿ ಪೂಜಾರಿ, ಪ್ರಮುಖರಾದ ಗುರುಪ್ರಸಾದ್ ಶೆಟ್ಟಿ ಮೊದಲಾದವರಿದ್ದರು.