ಮಂಗಳೂರು- ಮಡಿಕೇರಿ ಹೆದ್ದಾರಿ ಬಂದ್
Friday, July 19, 2024
ಮಂಗಳೂರು- ಮಡಿಕೇರಿ ಹೆದ್ದಾರಿ ಬಂದ್
ಲೋಕಬಂಧುನ್ಯೂಸ್ ಡೆಸ್ಕ್, ಮಡಿಕೇರಿ
ಮಂಗಳೂರು- ಮಡಿಕೇರಿ ಹೆದ್ದಾರಿಯ ಕರ್ತೋಜಿ ಗ್ರಾಮದ ಬಳಿ ಹೆದ್ದಾರಿ ದುರಸ್ತಿ ಕಾರ್ಯ ಹಾಗೂ ಗುಡ್ಡ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಮಂಗಳೂರು- ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು.
ಜುಲೈ 18 ಗುರುವಾರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಗ್ಗೆ 6 ಗಂಟೆ ವರೆಗೆ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸಂಪಾಜೆ ವರೆಗೆ ರಾತ್ರಿ ವೇಳೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.