ನಡಿಪಟ್ನ ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಭೇಟಿ
Saturday, July 20, 2024
ನಡಿಪಟ್ನ ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಭೇಟಿ
ಲೋಕಬಂಧುನ್ಯೂಸ್ ಡೆಸ್ಕ್, ಪಡುಬಿದ್ರಿ
ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ನ ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶನಿವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ವಿಪರೀತ ಕಡಲ್ಕೊರೆತ ಉಂಟಾಗುತ್ತಿದ್ದು ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ ಕಾಮಗಾರಿ ಕೈಗೊಳ್ಳಲು ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಸೂಚಿಸಿ, ಕಡಲ್ಕೊರೆತದ ಶಾಶ್ವತ ಪರಿಹಾರಕ್ಕೆ ಅನುದಾನ ಮಂಜೂರು ಮಾಡುವಂತೆ ಮೀನುಗಾರಿಕೆ ಸಚಿವರ ಬಳಿ ಮಾತನಾಡುವುದಾಗಿ ತಿಳಿಸಿದರು.
ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಹೇಮಚಂದ್ರ, ಸದಸ್ಯೆ ವಿದ್ಯಾಶ್ರೀ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಹಾಗೂ ಕಾಪು ತಹಶೀಲ್ದಾರ್ ಪ್ರತಿಭಾ, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರೆ ಶೋಭಾ ಮೊದಲಾದವರಿದ್ದರು.