-->
ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಭೇಟಿ

ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಭೇಟಿ

ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಭೇಟಿ

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ

ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು ಭಾಗದ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಶಾಸಕ ಯಶಪಾಲ್ ಸುವರ್ಣ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಡಲ್ಕೊರೆತ ಪ್ರದೇಶದಲ್ಲಿ ಈಗಾಗಲೇ ಹಲವು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಹಲವು ಮನೆಗಳು ಹಾಗೂ ಲಕ್ಷ್ಮೀನಾರಾಯಣ ಭಜನಾ ಮಂದಿರ ಬಳಿಯ ತಡೆಗೋಡೆ ಸಮುದ್ರ ಪಾಲಾಗುವ ಸಂಭವವಿದೆ. ತಕ್ಷಣ ತುರ್ತು ಕಾಮಗಾರಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
5 ಕೋ. ನೆರವಿಗೆ ಮನವಿ
ಸ್ಥಳದಲ್ಲೇ ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ ಅವರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆಯ ಗಂಭೀರತೆ ಬಗ್ಗೆ ಚರ್ಚಿಸಿ ತಕ್ಷಣ ಕಡಲ್ಕೊರೆತ ತಡೆ ಕಾಮಗಾರಿಗೆ 5 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ ಮಾಡಿದರು.


ಮಂಗಳವಾರ ಕರಾವಳಿ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಯನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಮನವಿ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಗುರುರಾಜ್, ಕೆಮ್ಮಣ್ಣು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮ ರವೀಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ಪುರಂದರ ಮತ್ತು ಪ್ರಶಾಂತ್, ಸ್ಥಳೀಯ ಮುಖಂಡರು, ಬಂದರು ಇಲಾಖೆ ಅಧಿಕಾರಿಗಳು, ಕೆಮ್ಮಣ್ಣು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೊದಲಾದವರಿದ್ದರು.


ಡಿಸಿ ಭೇಟಿ
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕೂಡಾ ಸಮುದ್ರ ಕೊರೆತ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿದರು.
ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್.ಆರ್. ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article