ಕೃಷ್ಣಮಠಕ್ಕೆ ಸಂಸದ ಚೌಟ ಭೇಟಿ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಂಸದ ಕ್ಯಾ.ಬೃಜೇಶ್ ಚೌಟ ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಶ್ರೀಕೃಷ್ಣ ಮುಖ್ಯಪ್ರಾಣ ದರ್ಶನ ಪಡೆದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂತೋಷ ಶೆಟ್ಟಿ ತೆಂಕರಗುತ್ತು ಇದ್ದರು.