ಮುಡಾ ಹಗರಣ: ರಾಜ್ಯಪಾಲರ ಮಧ್ಯಪ್ರವೇಶ
Tuesday, July 23, 2024
ಮುಡಾ ಹಗರಣ: ರಾಜ್ಯಪಾಲರ ಮಧ್ಯಪ್ರವೇಶ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಮುಡಾ ಸೈಟ್ ಹಗರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಜ್ಯಪಾಲರ ಮಧ್ಯಪ್ರವೇಶವಾಗಿದೆ.
ಮುಡಾ ಪ್ರಕರಣದ ಬಗ್ಗೆ ಪೂರ್ಣ ವಿವರಣೆ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ 2 ಕೋಟಿಯ 14 ನಿವೇಶನಗಳನ್ನು ವಿಜಯನಗರ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು 2 ಜಮೀನು ಮಾತ್ರ ಎಂದು ಬಿಜೆಪಿ ಮತ್ತು ಜೆಡಿಎಸ್ ಗಂಭೀರ ಆರೋಪ ಮಾಡುತ್ತಿದೆ.