ಜೈಲು ಸೇರಿದ ನಾಗೇಂದ್ರ
Tuesday, July 23, 2024
ಜೈಲು ಸೇರಿದ ನಾಗೇಂದ್ರ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ. ನಾಗೇಂದ್ರಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 7140 ನೀಡಲಾಗಿದೆ.
ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ನಾಗೇಂದ್ರಗೆ ವ್ಯವಸ್ಥೆ ಮಾಡಲಾಗಿದೆ.
ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು ನಾಗೇಂದ್ರ ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆಗಸ್ಟ್ 3ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.