-->
ಕಾಂಗ್ರೆಸ್ ಸೇರ್ಪಡೆಗೊಂಡ ಗ್ರಾ.ಪಂ.‌ ಅಧ್ಯಕ್ಷೆ

ಕಾಂಗ್ರೆಸ್ ಸೇರ್ಪಡೆಗೊಂಡ ಗ್ರಾ.ಪಂ.‌ ಅಧ್ಯಕ್ಷೆ

ಕಾಂಗ್ರೆಸ್ ಸೇರ್ಪಡೆಗೊಂಡ ಗ್ರಾ.ಪಂ.‌ ಅಧ್ಯಕ್ಷೆ

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ

ತೆಂಕನಿಡಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಧ್ಯಕ್ಷೆ ಶೋಭಾ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಶೋಭಾ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಅಧಿಕೃತವಾಗಿ ಸ್ವಾಗತಿಸಿದರು.
26 ಸದಸ್ಯ ಬಲದ ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಬಿಜೆಪಿ ಬೆಂಬಲಿತ 14 ಸದಸ್ಯರಿದ್ದು, ಕಾಂಗ್ರೆಸ್ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದು, ಎಸ್ ಟಿ ಮೀಸಲಾತಿಯಲ್ಲಿ ಶೋಭಾ ಬಿಜೆಪಿ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.


ಪ್ರಸ್ತುತ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿರುವುದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 13 ಸದಸ್ಯರೊಂದಿಗೆ ಸಮಬಲ ಸಾಧಿಸಿದ್ದು, ಪಂಚಾಯತ್ ಆಡಳಿತ ಕಾಂಗ್ರೆಸ್ ತೆಕ್ಕೆಗೆ ಬಂದಂತಾಗಿದೆ.


ಪಕ್ಷ ಸೇರ್ಪಡೆ ವೇಳೆ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ,  ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ನಾಯಕರಾದ ಗಣೇಶ್ ನೆರ್ಗಿ, ಗೋಪಾಲಕೃಷ್ಣ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಪಂಚಾಯತ್ ಸದಸ್ಯರಾದ ಸತೀಶ್ ನಾಯಕ್, ಸುರೇಶ್ ನಾಯಕ್, ಪೃಥ್ವಿರಾಜ್ ಶೆಟ್ಟಿ, ಶರತ್ ಶೆಟ್ಟಿ, ವೆಂಕಟೇಶ್ ಕುಲಾಲ್, ರವಿರಾಜ್ ಲಕ್ಷ್ಮೀನಗರ, ಮೀನಾ ಪಿಂಟೊ, ಸಿಂಪ್ರಿಯಾ ರೊಡ್ರಿಗಸ್, ಮಂಜುನಾಥ್ ಆಚಾರ್ಯ, ಅನುಷಾ ಆಚಾರ್ಯ ಮತ್ತು ವಿನಯ ಆಚಾರ್ಯ ಇದ್ದರು.

Ads on article

Advertise in articles 1

advertising articles 2

Advertise under the article