ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಶೀಘ್ರ ಪ್ರಕಟಿಸಿ
Thursday, July 18, 2024
ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಶೀಘ್ರ ಪ್ರಕಟಿಸಿ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯನ್ನು ಶೀಘ್ರವಾಗಿ ಪ್ರಕಟಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಆಗ್ರಹಿಸಿದರು.
ಗುರುವಾರ ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಡಾ. ಭಂಡಾರಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪ್ರಕಟಿಸದೇ ಇರುವುದರಿಂದ ಸಾರ್ವಜನಿಕರಿಗೆ ಆಗುವ ತೊಂದರೆಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳ ಹಕ್ಕು ಮೊಟಕುಗೊಳ್ಳುತ್ತಿರುವ ಕುರಿತು ಸದನದ ಗಮನ ಸೆಳೆದರು.
ಮೀಸಲಾತಿಯ ತೊಡಕುಗಳನ್ನು ನಿವಾರಿಸಿ ಕೂಡಲೇ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಯ ಮೀಸಲಾತಿ ಪ್ರಕಟಿಸುವಂತೆ ಸಚಿವರನ್ನು ಆಗ್ರಹಿಸಿದರು.