-->
ಒಂದು ಎಕ್ರೆಗಿಂತ ಕಡಿಮೆ ಪ್ರದೇಶದ ಏಕವಿನ್ಯಾಸ ಅನುಮೋದನೆ ನೂತನ ಆದೇಶ ರದ್ದುಮಾಡಿ

ಒಂದು ಎಕ್ರೆಗಿಂತ ಕಡಿಮೆ ಪ್ರದೇಶದ ಏಕವಿನ್ಯಾಸ ಅನುಮೋದನೆ ನೂತನ ಆದೇಶ ರದ್ದುಮಾಡಿ

ಒಂದು ಎಕ್ರೆಗಿಂತ ಕಡಿಮೆ ಪ್ರದೇಶದ ಏಕವಿನ್ಯಾಸ ಅನುಮೋದನೆ ನೂತನ ಆದೇಶ ರದ್ದುಮಾಡಿ

ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು

ಸ್ಥಳೀಯ ಯೋಜನೆ ಪ್ರದೇಶದ ಹೊರಭಾಗದಲ್ಲಿರುವ ಒಂದು ಎಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ ಹಾಗೂ ವಸತಿಯೇತರರಿಗೆ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ಸಂಬಂಧಿಸಿದ ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ನಲ್ಲಿಯೇ ಈ ಹಿಂದಿನಂತೆ ಪಡೆಯಲು ಆದೇಶ ನೀಡುವಂತೆ ನಗರಾಭಿವೃದ್ಧಿ ಸಚಿವ ಬಿ. ಎಸ್. ಸುರೇಶ್ ಅವರಿಗೆ ಶುಕ್ರವಾರ ಕರಾವಳಿ ಭಾಗದ ಶಾಸಕರು ಮನವಿ ಸಲ್ಲಿಸಿದರು.
ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಾಣದ ಪೂರ್ವದಲ್ಲಿ ಏಕ ವಿನ್ಯಾಸ ಅನುಮೋದನೆ ನಗರ ಮತ್ತು ಗ್ರಾಮಾಂತರ ಇಲಾಖೆಯಿಂದ ಪಡೆದುಕೊಳ್ಳಬೇಕು ಎನ್ನುವ ಆದೇಶವಾಗಿದ್ದು, ಅದರಿಂದ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ.


ನಗರ ಮತ್ತು ಗ್ರಾಮಾಂತರ ಇಲಾಖೆಯಲ್ಲಿ ಸಿಬ್ಬಂದಿಗಳ ತೀವ್ರ ಕೊರತೆ ಇದ್ದು ಗ್ರಾಮೀಣ ಭಾಗದ ಜನರು ಜಿಲ್ಲಾ ಕೇಂದ್ರಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.


ಆದ್ದರಿಂದ ಗ್ರಾಮೀಣ ಭಾಗದ ಜನರು ಈ ಹಿಂದಿನಂತೆ ಗ್ರಾಮ ಪಂಚಾಯತ್ ಅಥವಾ ತಾಲೂಕು ಪಂಚಾಯತ್ ನಿಂದ ಏಕ ವಿನ್ಯಾಸ ಅನುಮೋದನೆ ಪಡೆದುಕೊಳ್ಳಲು ಆದೇಶಿಸುವಂತೆ ಕರಾವಳಿ ಭಾಗದ ಎಲ್ಲ ಶಾಸಕರು ಸಚಿವರಿಗೆ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಕರಾವಳಿ ಭಾಗದ ಶಾಸಕರಾದ ವಿ. ಸುನಿಲ್ ಕುಮಾರ್, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಡಾ.ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article