.jpg)
ಕನ್ನಡ ಶಾಲೆ ಉಳಿಸಿ ಅಭಿಯಾನ ಭಿತ್ತಿಪತ್ರ ಬಿಡುಗಡೆ
Sunday, July 21, 2024
ಕನ್ನಡ ಶಾಲೆ ಉಳಿಸಿ ಅಭಿಯಾನ ಭಿತ್ತಿಪತ್ರ ಬಿಡುಗಡೆ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ 'ಬೆಳಕಿನ ಬಾಗಿಲು ಕನ್ನಡ ಶಾಲೆ: ಉಳಿಸಲು ಬೇಕು ಮಕ್ಕಳ ಲೀಲೆ' ಎಂಬ ಶೀರ್ಷಿಕೆಯಡಿ ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನದ ಬಿತ್ತಿಪತ್ರವನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಶನಿವಾರ ಇಲ್ಲಿನ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಬಿಡುಗಡೆಗೊಳಿಸಿದರು.
ಶಾಸಕನ ನೆಲೆಯಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಯಶಪಾಲ್ ಭರವಸೆಯಿತ್ತರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಮತ್ತು ರಂಜಿನಿ ವಸಂತ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲೀಲಾ ಭಟ್, ಕಿದಿಯೂರು ಹೋಟೆಲ್ ನ ಜಿತೇಶ್ ಕಿದಿಯೂರು, ಕಸಾಪ ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸದಸ್ಯರಾದ ವಸಂತ್, ಈರಣ್ಣ ಕುರುವತ್ತಿ ಗೌಡ ಮೊದಲಾದವರಿದ್ದರು .