ಅಭಿವೃದ್ಧಿಗೆ ಪೂರಕ ಬಜೆಟ್
Wednesday, July 24, 2024
ಅಭಿವೃದ್ಧಿಗೆ ಪೂರಕ ಬಜೆಟ್
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಉದ್ಯೋಗ ಸೃಷ್ಟಿ ಹಾಗೂ ಸ್ವಉದ್ಯೋಗಕ್ಕೆ ಪೂರಕ ಬಜೆಟ್ ಇದಾಗಿದ್ದು, ಅಭಿವೃದ್ಧಿಗೆ ಪೂರಕವಾಗಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ ಶೆಟ್ಟಿ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಬಡ್ಡಿ ರಹಿತ ಸಾಲ ಉತ್ತಮ ಯೋಜನೆ. ಸ್ಟ್ಯಾಂಪ್ ಡ್ಯೂಟಿ ಕಡಿಮೆ ಮಾಡಲು ರಾಜ್ಯಗಳಿಗೆ ಮನವಿ ಮಾಡಿರುವುದು ಉತ್ತಮ ಬೆಳವಣಿಗೆ.
ಕೃಷಿಕರಿಗೆ ಸವಲತ್ತು ಹಾಗೂ ದೇಶದ ಮಹಿಳೆಯರು, ಯುವಜನತೆಗೆ ಪ್ರೋತ್ಸಾಹ ನೀಡಲಾಗಿದೆ ಎಂದು ಯೋಗೀಶ ಶೆಟ್ಟಿ ವಿಶ್ಲೇಷಿಸಿದ್ದಾರೆ