ವಾಲ್ಮೀಕಿ ನಿಗಮ ಹಗರಣ: ಇ.ಡಿ. ಅಧಿಕಾರಿಗಳ ವಿರುದ್ಧವೇ ಕೇಸ್
Tuesday, July 23, 2024
ವಾಲ್ಮೀಕಿ ನಿಗಮ ಹಗರಣ: ಇ.ಡಿ. ಅಧಿಕಾರಿಗಳ ವಿರುದ್ಧವೇ ಕೇಸ್
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಹೆಸರು ಹೇಳುವಂತೆ ತಮಗೆ ಬೆದರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇ.ಡಿ. ಅಧಿಕಾರಿಗಳ ವಿರುದ್ಧವೇ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ನಿರ್ದೇಶಕ ನೀಡಿದ ದೂರು ಆಧರಿಸಿ ಮಂಗಳವಾರ ಎಫ್ಐಆರ್ ದಾಖಲಾಗಿದೆ.
ಆ ಮೂಲಕ ಮೊದಲ ಬಾರಿಗೆ ರಾಜ್ಯದಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ತನಿಖೆ ಸಂಸ್ಥೆ ವಿರುದ್ಧ ಕೇಸ್ ದಾಖಲಾಗಿದೆ.
ಜೊತೆಗೆ ವಾಲ್ಮೀಕಿ ನಿಗಮ ಹಗರಣ ಮುಂದಿಟ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತನಿಖಾ ಸಂಸ್ಥೆಗಳ ನಡುವೆ ಸಂಘರ್ಷ ಶುರುವಾಗಿದೆ.