
ವಕ್ಫ್ ನೆಪದಲ್ಲಿ ರೈತರ ಭೂಮಿ ಕಬಳಿಸಲು ಯತ್ನ
Wednesday, November 6, 2024
ಲೋಕಬಂಧು ನ್ಯೂಸ್, ಕಾರ್ಕಳ
ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರಕಾರ ಮುಂದಾಗಿದ್ದು ನೋಟಿಸ್ ನೀಡಿರುವುದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ. ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಈ ಹಿಂದೆ ರಾಜ್ಯ ಸರಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಕಳೆದ ಏಪ್ರಿಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21,767 ಎಕರೆ ವಕ್ಫ್ ಭೂಮಿಯನ್ನು ವಶಪಡಿಸಿಕೊಳ್ಳುವಂತೆ ಸೂಚನೆ ನೀಡಿದ್ದರು.
ಆ ಸಂಬಂಧ ಕಂದಾಯ ಹಾಗೂ ವಕ್ಫ್ ಇಲಾಖೆ ಜಂಟಿ ಸಭೆ ನಡೆಸಿತ್ತು.
ಸಿಎಂ ಸಿದ್ದರಾಮಯ್ಯನವರ ಸೂಚನೆ ಇಲ್ಲದೇ ಅಧಿಕಾರಿಗಳು ಇಂಥ ನಿರ್ಣಯ ತೆಗದುಕೊಳ್ಳಲು ಸಾಧ್ಯವಿತ್ತೇ ಎಂದು ಶಾಸಕ ಸುನಿಲ್ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.