
ರಾಜಕೀಯವಾಗಿ ಬಿಎಸ್.ವೈ ಮುಗಿಸಲು ಬೊಮ್ಮಾಯಿ ತಂತ್ರ
Wednesday, November 6, 2024
ಲೋಕಬಂಧು ನ್ಯೂಸ್, ಶಿಗ್ಗಾವಿ
ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೆ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗೆಲುವಿಗೆ ಪ್ರಚಾರ ಕೈಗೊಂಡು ಮಂಗಳವಾರ ಮಾತನಾಡಿದರು.
ಮೋದಿ ಮಹಾನ್ ಸುಳ್ಳುಗಾರ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡ ಹೇಳಿದ್ದರು. ಈಗ ಇಬ್ಬರೂ ಭಾಯಿ ಭಾಯಿ ಆಗಿದ್ದಾರೆ ಎಂದರು.