ಎಡನೀರು ಮಠಾಧೀಶರಿಗೆ ಹಲ್ಲೆ ಯತ್ನ: ಬ್ರಾಹ್ಮಣ ಮಹಾಸಭಾ ಖಂಡನೆ
Tuesday, November 5, 2024
ಲೋಕಬಂಧು ನ್ಯೂಸ್, ಬೆಂಗಳೂರು
ಕಾಸರಗೋಡಿನ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದಭಾರತೀ ಶ್ರೀಗಳ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ.ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಸಭಾದ ತುರ್ತು ಸಭೆಯಲ್ಲಿ ಖಂಡನಾ ನಿರ್ಣಯ ತಳೆಯಲಾಗಿದ್ದು, ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಸಂಚರಿಸುತ್ತಿದ್ದ ಕಾರನ್ನು ಕಾಸರಗೋಡಿನ ಬೋವಿಕ್ಕಾನ- ಇರಿಯಣ್ಣಿ ಮಾರ್ಗ ಮಧ್ಯೆ ಸಮಾಜಘಾತುಕ ಶಕ್ತಿಗಳು ಅಡ್ಡಗಟ್ಟಿ ಹಾನಿ ಮಾಡಲು ಪ್ರಯತ್ನಿಸಿರುವುದು ಆಘಾತಕಾರಿ ವಿಷಯ.
ಹಿಂದೂಗಳು ಶ್ರದ್ಧಾಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಶ್ರೀಗಳ ಮೇಲೆ ನಡೆದಿರುವ ಈ ದಾಳಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ತೀವ್ರವಾಗಿ ಖಂಡಿಸುತ್ತದೆ.
ಈ ಕೂಡಲೇ ಕೇರಳ ಸರ್ಕಾರ ಸ್ವಾಮೀಜಿ ಮೇಲಿನ ಹಲ್ಲೆ ಯತ್ನ ಪ್ರಕರಣದ ತನಿಖೆಯನ್ನು ತ್ವರಿತ ಗತಿಯಲ್ಲಿ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಡನೀರು ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ಸರ್ಕಾರದ ಕಡೆಯಿಂದ ಕಲ್ಪಿಸಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಕೇರಳದ ಸರ್ಕಾರವನ್ನು ಒತ್ತಾಯಿಸುವುದಾಗಿ ಅಶೋಕ ಹಾರನಹಳ್ಳಿ ತಿಳಿಸಿದ್ದಾರೆ.