ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅಸ್ತು
Thursday, November 7, 2024
ಲೋಕಬಂಧು ನ್ಯೂಸ್, ನವದೆಹಲಿ
ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ ಯೋಜನೆಗೆ ಅನುಮೋದನೆ ನೀಡಿದೆ.
ಈ ಯೋಜನೆಯೊಂದಿಗೆ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಬ್ಯಾಂಕ್ಗಳಿಂದ ಮೇಲಾಧಾರ ಮತ್ತು ಜಾಮೀನುದಾರ ರಹಿತ ಸಾಲ ಪಡೆಯಲು ಸಾಧ್ಯವಾಗುತ್ತದೆ. ವಾರ್ಷಿಕ 22 ಲಕ್ಷ ವಿದ್ಯಾರ್ಥಿಗಳು ಯೋಜನೆಯ ಲಾಭ ಪಡೆಯಬಹುದು.
2024- 25ರಿಂದ 2030- 31ರ ವರೆಗೆ ಈ ಯೋಜನೆಗಾಗಿ 3,600 ಕೋಟಿ ರೂ. ಕೇಂದ್ರ ಸರ್ಕಾರ ಮೀಸಲಿಡಲಿದೆ ಹಾಗೂ ಈ ಯೋಜನೆ ಸುಮಾರು 7 ಲಕ್ಷ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.