-->
ಮಕ್ಕಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು

ಮಕ್ಕಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು

ಲೋಕಬಂಧು ನ್ಯೂಸ್, ಉಡುಪಿ
ಮಕ್ಕಳು ಪಠ್ಯ ಪುಸ್ತಕಗಳೊಂದಿಗೆ ಪಠ್ಯೇತರ ಪುಸ್ತಕಗಳನ್ನು ಓದುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು.
ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ ಅಂಗವಾಗಿ ಬುಧವಾರ ಅಜ್ಜರಕಾಡು ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.


ಗ್ರಂಥಾಲಯದಲ್ಲಿ ಇಂಥ ಚಟುವಟಿಕೆಗಳನ್ನು ಏರ್ಪಡಿಸುವುದರಿಂದ ಮಕ್ಕಳಲ್ಲಿ ಪಠ್ಯೇತರ ಚಟುವಟಿಕೆಗಳ ಕುರಿತು ಇನ್ನಷ್ಟು‌ ಆಸಕ್ತಿ ಹೆಚ್ಚಿಸಲು ಪೂರಕವಾಗುತ್ತದೆ ಎಂದರು.


ಸಾಹಿತಿ ಹಾಗೂ ಶಾರದ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಜಾನ್ಸನ್ ಮಾತನಾಡಿ, ಮೊಬೈಲ್ ಬಳಕೆ ಕಡಿಮೆ ಮಾಡಿ ವಿದ್ಯಾರ್ಥಿಗಳು ಪುಸ್ತಕದ ಜೊತೆ ಗೆಳೆತನ ಮಾಡಬೇಕು. ಓದುವ ಹವ್ಯಾಸವನ್ನು ಮಕ್ಕಳು ರೂಢಿಸಿಕೊಳ್ಳಬೇಕು ಎಂದರು.


ಅಜ್ಜರಕಾಡು ಡಾ.ಜಿ.‌ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕಿ ಗಿರಿಜಾ ಹೆಗ್ಡೆ ಗಾಂವ್ಕರ್, ಬಾಲ್ಯದಿಂದಲೇ ಮಕ್ಕಳು ಕಥೆಗಳನ್ನು ಓದಬೇಕು. ಓದುವ ಹವ್ಯಾಸದಿಂದ ಕಥೆಗಳನ್ನು ಬರೆಯುವ ಪ್ರವೃತ್ತಿ ಬೆಳೆಯುತ್ತದೆ. ಜ್ಞಾನ ದೇಗುಲವಾಗಿರುವ  ಗ್ರಂಥಾಲಯ ಮುಂದಿನ ಭವಿಷ್ಯ ರೂಪಿಸಲು ವೇದಿಕೆಯಾಗಿದೆ ಎಂದರು.


ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಸ್ವಾಗತಿಸಿ. ಗ್ರಂಥಪಾಲಕಿ ರಂಜಿತ ಸಿ. ನಿರೂಪಿಸಿದರು. ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು.
ಸುಮಾರು 75ಕ್ಕಿಂತ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article