.jpg)
ದೇಹ ದೇಶ ದೇವ ಮಂದಿರಗಳಲ್ಲಿ ಸ್ವಚ್ಛತೆ ಅಭಿಯಾನ
Sunday, November 3, 2024
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಪರಿಕಲ್ಪನೆ, ಆದೇಶ ಮತ್ತು ಮಾರ್ಗದರ್ಶನದಂತೆ ದೇಹ ದೇಶ ದೇವ ಮಂದಿರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಉದ್ದೇಶದೊಂದಿಗೆ ಸ್ವಚ್ಛ ಭಾರತ್ ಅಭಿಯಾನಕ್ಕೆ ಪೂರಕವಾಗಿ ಶ್ರೀಕೃಷ್ಣಗೀತಾ ಸೇವಾ ವೃಂದ ರಚಿಸಿಕೊಂಡು ಸ್ವಚ್ಛತಾ ಕೆಲಸಗಳನ್ನು ಕೈಗೊಳ್ಳಲು ಉದ್ದೇಶಿಸಿದ್ದು, ಭಾನುವಾರ ಗೀತಾ ಮಂದಿರದಲ್ಲಿ ಪುತ್ತಿಗೆ ಶ್ರೀಗಳು ಚಾಲನೆ ನೀಡಿ ಶುಭ ಹಾರೈಸಿದರು.
ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ಗಾಂಧಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ವ್ಯಾಸರಾಜ ತಂತ್ರಿ, ಪತಂಜಲಿ ಯೋಗ ಸಮಿತಿಯ ಕೆ. ರಾಘವೇಂದ್ರ ಭಟ್, ಮಠದ ದಿವಾನ ನಾಗರಾಜ್ ಆಚಾರ್ಯ, ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.