ಲೋಕಾಯುಕ್ತ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಹಾಜರು
Wednesday, November 6, 2024
ಲೋಕಬಂಧು ನ್ಯೂಸ್, ಮೈಸೂರು
ಮುಡಾ ಭೂಹಗರಣ ಪ್ರಕರಣದ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಇಲ್ಲಿನ ಲೋಕಾಯುಕ್ತ ಕಚೇರಿಗೆ ಬುಧವಾರ ಹಾಜರಾಗಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಾನೂನು ಸಲಹೆಗಾರ ಪೊನ್ನಣ್ಣ ಜೊತೆ ಲೋಕಾಯುಕ್ತ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಮುಡಾ ನಿವೇಶನ ಅಕ್ರಮ ಪರಭಾರೆ ಸಂಬಂಧ ಲೋಕಾಯುಕ್ತ ಪೊಲೀಸರಿಂದ ಸಮಗ್ರ ವಿಚಾರಣೆ ನಡೆಯಲಿದೆ.
ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಲೋಕಾಯುಕ್ತ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.