ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ
Sunday, November 3, 2024
ಲೋಕಬಂಧು ನ್ಯೂಸ್, ಮುಂಬೈ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.ಮುಂದಿನ 10 ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲವಾದರೆ ಮುಂಬೈನಲ್ಲಿ ಇತ್ತೀಚೆಗೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯಾದ ರೀತಿಯಲ್ಲೇ ಯೋಗಿ ಹತ್ಯೆಯೂ ಆಗಲಿದೆ ಎಂದು ಅನಾಮಿಕರೋರ್ವರಿಂದ ನ.3ರಂದು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯನ್ನು ಹೆಚ್ಚಿಸಲಾಗಿದೆ.