
ಚಿಟ್ಟಾಣಿ ಯಕ್ಷಗಾನ ಸಪ್ತಾಹಕ್ಕೆ ಚಾಲನೆ
Wednesday, November 6, 2024
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಚಿಟ್ಟಾಣಿ ಅಭಿಮಾನಿ ಬಳಗದಿಂದ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹವನ್ನು ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಂಗಳವಾರ ಉದ್ಘಾಟಿಸಿದರು.
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಚಿಟ್ಟಾಣಿ ಅಭಿಮಾನಿ ಬಳಗದ ಕಾರ್ಯದರ್ಶಿ ಗೋಪಿಕೃಷ್ಣ ರಾವ್, ಯಕ್ಷಗಾನ ಕಲಾರಂಗ ಅಧ್ಯಕ್ಷ ನಂದಕುಮಾರ್, ಕಾರ್ತೀಕ್ ಚಿಟ್ಟಾಣಿ, ರಮೇಶ್ ಭಟ್, ನಾರಾಯಣ ಹೆಗಡೆ, ಮುರಳಿ ಕಡೆಕಾರ್, ಶೃಂಗೇಶ್ವರ ಉಪಸ್ಥಿತರಿದ್ದರು.
ಸಪ್ತಾಹ ನ.11ರ ವರೆಗೆ ನಡೆಯಲಿದೆ.