.jpg)
ಎಡನೀರು ಸ್ವಾಮೀಜಿ ಹಲ್ಲೆ ಯತ್ನ: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಖಂಡನೆ
Monday, November 4, 2024
ಲೋಕಬಂಧು ನ್ಯೂಸ್, ಉಡುಪಿ
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಸಂಚರಿಸುತ್ತಿದ್ದ ವಾಹನ ತಡೆದು, ದುಷ್ಕರ್ಮಿಗಳು ಶ್ರೀಗಳಿಗೆ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ತೀವ್ರವಾಗಿ ಖಂಡಿಸಿದೆ.
ಸೋಮವಾರ ಸಂಜೆ ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ನಡೆಯುತ್ತಿದ್ದ ಧಾರ್ಮಿಕ ಸಭೆಯಲ್ಲಿ ಈ ದುರ್ಘಟನೆಯನ್ನು ಉಲ್ಲೇಖಿಸಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.
ಸರಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸ್ವಾಮೀಜಿಯವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಒದಗಿಸಬೇಕೆಂದು ಸಭೆ ಆಗ್ರಹಿಸಿತು.