
ಎಡನೀರು ಶ್ರೀ ಹಲ್ಲೆ ಯತ್ನ: ಪುತ್ತಿಗೆ ಶ್ರೀ ಖಂಡನೆ
Tuesday, November 5, 2024
ಲೋಕಬಂಧು ನ್ಯೂಸ್, ಉಡುಪಿ
ಕಾಸರಗೋಡಿನ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳ ಕೃತ್ಯವನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಖಂಡಿಸಿದ್ದಾರೆ.
ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿರತರಾಗಿರುವ ಯತಿಯೋರ್ವರ ಮೇಲೆ ನಡೆದ ಕೃತ್ಯ ಖಂಡನೀಯ.
ಶ್ರೀಗಳಿಗೆ ಕೇರಳ ಸರಕಾರ ಸೂಕ್ತ ರಕ್ಷಣೆ ನೀಡಬೇಕು. ಹಾಗೂ ಕೃತ್ಯ ಎಸಗಿದ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಪುತ್ತಿಗೆ ಶ್ರೀಗಳು ಒತ್ತಾಯಿಸಿದ್ದಾರೆ