-->
ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಲೋಕಬಂಧು ನ್ಯೂಸ್, ಬೆಂಗಳೂರು
ಎಡಿಜಿಪಿ ಚಂದ್ರಶೇಖರ್ ನೀಡಿದ ದೂರಿನ ಆಧಾರದಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನ. 5ರಂದು ಎಫ್‌.ಐಆರ್ ದಾಖಲಾಗಿದೆ.ಬಿಎನ್‌ಎಸ್‌ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪ್ರಕರಣದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಆರೋಪಿ ನಂಬರ್ 1 ಆಗಿದ್ದಾರೆ. ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ.


ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿನಲ್ಲಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ‌ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆ‌ರ್ ದಾಖಲಾಗಿದೆ.


ನಿಯಮ ಉಲ್ಲಂಘಿಸಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖ‌ರ್ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

Ads on article

Advertise in articles 1

advertising articles 2

Advertise under the article