
ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ
Wednesday, November 6, 2024
ಲೋಕಬಂಧು ನ್ಯೂಸ್, ಬೆಂಗಳೂರು
ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆಯುತ್ತದೆ ಎಂದು ಮೋದಿ ಅವರನ್ನು ಪ್ರಧಾನಿ ಕಚೇರಿ ದಾರಿ ತಪ್ಪಿಸಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಳೆದ 60 ವರ್ಷಗಳಲ್ಲಿ ನೀಡಿದ ಯಾವುದೇ ಯೋಜನೆ ಹಿಂದಕ್ಕೆ ಪಡೆದ ಇತಿಹಾಸವಿಲ್ಲ. ಉಳುವವನಿಗೆ ಭೂಮಿ, ನರೇಗಾ ಯೋಜನೆ ಈಗಲೂ ಚಾಲ್ತಿಯಲ್ಲಿವೆ.
ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಟ್ಟ ರಾಜಕೀಯ ಗಿಮಿಕ್ ನಡೆಯುತ್ತಿದೆ. ದೇಶದ ಉನ್ನತ ಕಚೇರಿ ಇಂಥ ಸುಳ್ಳು ಹರಡಬಾರದು ಎಂದರು.