-->
ನೈತಿಕ ಹೊಣೆ ಹೊತ್ತು ಹೆಬ್ಬಾಳ್ಕರ್ ರಾಜೀನಾಮೆ ನೀಡಲಿ

ನೈತಿಕ ಹೊಣೆ ಹೊತ್ತು ಹೆಬ್ಬಾಳ್ಕರ್ ರಾಜೀನಾಮೆ ನೀಡಲಿ

ಲೋಕಬಂಧು ನ್ಯೂಸ್, ಬೆಂಗಳೂರು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ಕಿರುಕುಳಕ್ಕೆ ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು ನಿರಂತರ ಮಾನಸಿಕ ಕಿರುಕುಳ ನೀಡಿ ಹಿಂಸೆ ನೀಡಿದ ಪರಿಣಾಮ ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಈ ಸರ್ಕಾರದಲ್ಲಿ ಇದು ಮೊದಲನೇ ಆತ್ಮಹತ್ಯೆ ಏನಲ್ಲ. ವಾಲ್ಮೀಕಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಸಹ ಸಚಿವ ನಾಗೇಂದ್ರ ಅವರ ಮಾನಸಿಕ ಹಿಂಸೆ ತಾಳಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.


ಸಚಿವೆ ಹೆಬ್ಬಾಳ್ಕರ್ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಆಪ್ತ ಸಹಾಯಕ ಸೋಮು ಅವರನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ನಡೆಸಿದರೆ ಮಾತ್ರ ಸತ್ಯ ಹೊರಬರುತ್ತದೆ ಎಂದು ಶಾಸಕ ಯತ್ನಾಳ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article