ಟ್ರಂಪ್ ಗೆ ಮೋದಿ ಅಭಿನಂದನೆ
Thursday, November 7, 2024
ಲೋಕಬಂಧು ನ್ಯೂಸ್, ನವದೆಹಲಿ
ಅಮೆರಿಕ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಅಭಿನಂದಿಸಿದ್ದಾರೆ.ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ನ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ.
ಅಮೆರಿಕದ 47ನೇ ಅಧ್ಯಕ್ಷರಾಗಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಲಿದ್ದಾರೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಐತಿಹಾಸಿಕ ಗೆಲುವು ಸಾಧಿಸಿದ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ.
ನಿಮ್ಮ ಹಿಂದಿನ ಅವಧಿಯ ಯಶಸ್ಸಿನಂತೆಯೇ ಭಾರತ- ಅಮೆರಿಕ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಿಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.