ವಿಚಾರಣೆಗೆ ಹಾಜರಾಗಲು ಸಿದ್ದರಾಮಯ್ಯಗೆ ನೋಟಿಸ್
Monday, November 4, 2024
ಲೋಕಬಂಧು ನ್ಯೂಸ್, ಬೆಂಗಳೂರು
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.ನ. 6ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈಗಾಗಲೇ ಲೋಕಾಯುಕ್ತ ಪೊಲೀಸರು ಎ2 ಪಾರ್ವತಿ, ಎ3 ಮಲ್ಲಿಕಾರ್ಜುನ ಮತ್ತು ಎ4 ದೇವರಾಜು ವಿಚಾರಣೆ ನಡೆಸಿದ್ದಾರೆ.
40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ aವರಿಗೆ ಇದು ಮೊದಲ ವಿಚಾರಣೆ ಎನ್ನಲಾಗಿದೆ.