
ವಿಧಾನಮಂಡಲ ಅಧಿವೇಶನಕ್ಕೆ ಒಬಾಮಾ?
Wednesday, November 6, 2024
ಲೋಕಬಂಧು ನ್ಯೂಸ್, ಬೆಂಗಳೂರು
ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ವಿಧಾನ ಮಂಡಲದ ಅಧಿವೇಶನಕ್ಕೆ ಆಹ್ವಾನ ನೀಡಿ ರಾಜ್ಯ ಸರ್ಕಾರ ಪತ್ರ ಬರೆದಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುವಂತೆ ಬರಾಕ್ ಒಬಾಮಾ ಅವರಿಗೆ ಪತ್ರ ಬರೆಯಲಾಗಿದೆ.
ಗಾಂಧೀಜಿ ಕುರಿತ ಮಹತ್ವದ ಸಂದೇಶಗಳನ್ನು ಒಬಾಮಾ ಮೂಲಕ ರವಾನಿಸಲು ಸರ್ಕಾರ ನಿರ್ಧರಿಸಿದ್ದು, ಸಚಿವ ಎಚ್.ಕೆ.ಪಾಟೀಲ್ ಕೂಡಾ ಬರಾಕ್ ಒಬಾಮಾ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ.