
ನಿಖಿಲ್ ಗೆಲುವಿಗೆ ಕೊಲ್ಲೂರಿನಲ್ಲಿ ಪೂಜೆ
Wednesday, November 6, 2024
ಲೋಕಬಂಧು ನ್ಯೂಸ್, ಕುಂದಾಪುರ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಪ್ರಾರ್ಥಿಸಿ ಉಡುಪಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಬುಧವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಜೆ.ಡಿ.ಎಸ್ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ಜೆ.ಡಿ.ಎಸ್ ನಾಯಕರಾದ ಶ್ರೀಕಾಂತ ಅಡಿಗ ಕೊಲ್ಲೂರು, ಸಂದೇಶ್ ಭಟ್, ಗಂಗಾಧರ ಬಿರ್ತಿ ಮೊದಲಾದವರಿದ್ದರು.