
ಖ್ಯಾತ ನಿರ್ದೇಶಕ ಗುರುಪ್ರಸಾದ್ ನೇಣಿಗೆ ಶರಣು
Sunday, November 3, 2024
ಲೋಕಬಂಧು ನ್ಯೂಸ್, ಬೆಂಗಳೂರು
'ಮಠ' ಸೇರಿದಂತೆ ಹಲವು ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ಹಿರಿಯ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ (52) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾನುವಾರ ಮುಂಜಾನೆ ಬೆಂಗಳೂರಿನ ತಮ್ಮ ಅಪಾರ್ಟ್‌ಮೆಂಟ್ ನಿವಾಸದಿಂದ ಕೊಳೆತ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಸಾಲಗಾರರ ಕಿರುಕುಳದಿಂದ ಬೇಸತ್ತು ಮಾದನಾಯಕನಹಳ್ಳಿಯ ತಮ್ಮ ಫ್ಲ್ಯಾಟ್‌ನಲ್ಲಿ ನೇಣು ಬಿಗಿದು ಸಾವಿಗೆ ಶರಣಾಗಿರುವುದಾಗಿ ಹೇಳಲಾಗುತ್ತಿದೆ.
ನ.2 ಅವರ ಹುಟ್ಟುಹಬ್ಬವಾಗಿತ್ತು.