ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ನೇಣಿಗೆ ಶರಣು
Wednesday, November 6, 2024
ಲೋಕಬಂಧು ನ್ಯೂಸ್, ಬೆಳಗಾವಿ
ಸಚಿವೆ ಲಕ್ಷ್ನೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಸೋಮವಾರ ರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಿಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಬಂದ ಬಳಿಕ ವಿಷಯ ಗೊತ್ತಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಎಸ್ಡಿಸಿ ರುದ್ರೇಶ ಯಾದವಣ್ಣವರ (35) ಎಂದು ಗುರುತಿಸಲಾಗಿದೆ.
ಬೆಳಗಾವಿ ರಿಸಾಲ್ದಾರದಲ್ಲಿರುವ ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಸೀಲ್ದಾರ್ ಕಚೇರಿಯಲ್ಲಿ ರುದ್ದಣ್ಣ ಅವರು ತಮ್ಮ ಹಿರಿಯ ಅಧಿಕಾರಿಗಳಿಂದ ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡು ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಖಡೇ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.