ಗೆಲುವಿನ ಹಾದಿಯಲ್ಲಿ ಟ್ರಂಪ್
Wednesday, November 6, 2024
ಲೋಕಬಂಧು ನ್ಯೂಸ್, ಅಮೆರಿಕ
ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಂಡ ಮುನ್ನಡೆ ಸಾಧಿಸಿದ್ದು, ಕಮಲಾ ಹ್ಯಾರಿಸ್ ಹಿನ್ನೆಡೆ ಅನುಭವಿಸಿದ್ದಾರೆ.ಗೆಲುವಿಗೆ 270 ಸ್ಥಾನಗಳ ಆವಶ್ಯಕತೆಯಿದ್ದು, ಆ ಸ್ಥಾನಗಳಲ್ಲಿ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ. ಸೆನೆಟ್ ಸದಸ್ಯರ 538 ಮತಗಳ ಪೈಕಿ 270 ಅಥವಾ ಅದಕ್ಕಿಂತ ಹೆಚ್ಚು ಮತ ಗಳಿಸುವ ಅಭ್ಯರ್ಥಿ ಅಮೆರಿಕಾದ ಅಧ್ಯಕ್ಷರಾಗಲಿದ್ದಾರೆ.
ಅಮೆರಿಕಾದ ಅಧ್ಯಕೀಯ ಚುನಾವಣೆ ಕುರಿತು ಬುಧವಾರ ಸಂಜೆ ಹೊತ್ತಿಗೆ ಸಂಪೂರ್ಣ ಫಲಿತಾಂಶ ಪ್ರಕಟಗೊಳ್ಳಲಿದೆ. ಅದಾದ ನಂತರ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಫ್ಲೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.