-->
ಹೂಡಿಕೆ ವೃದ್ಧಿಗೆ 'ಉಮಾ'

ಹೂಡಿಕೆ ವೃದ್ಧಿಗೆ 'ಉಮಾ'

ಲೋಕಬಂಧು ನ್ಯೂಸ್, ಬೆಂಗಳೂರು
ರಾಜ್ಯದಲ್ಲಿ ಹೂಡಿಕೆ ಹೆಚ್ಚಳಕ್ಕೆ 'ಉದ್ಯೋಗ ಮಿತ್ರ ಅಸಿಸ್ಟೆಂಟ್ (ಉಮಾ) ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಫೆಬ್ರುವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಹೂಡಿಕೆ ಹೆಚ್ಚಿಸಿ ಕೈಗಾರಿಕೆಗಳ ನಿರ್ಮಾಣದ ವೇಗ ಹೆಚ್ಚಿಸಲು ಯೋಜನೆಗಳ ಅನುಷ್ಠಾನದ ಪ್ರಕ್ರಿಯೆಗಳನ್ನು ಸುಗಮಗೊಳಿಸುವುದು ಅವಶ್ಯಕ.ಈ ಹಿನ್ನೆಲೆಯಲ್ಲಿ ಉದ್ಯೋಗ ಮಿತ್ರ ಅಸಿಸ್ಟೆಂಟ್ ತಂತ್ರಾಂಶ 'ಉಮಾ' ಅಭಿವೃದ್ಧಿಪಡಿಸಲಾಗಿದ್ದು ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ಪಡೆದ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಲಾಗುವುದು.


33 ಇಲಾಖೆಗಳ 147 ಸೇವೆಗಳಿಗೆ ಈ ತಂತ್ರಾಂಶದಿಂದ ಅನುಮೋದನೆ ಸಿಗಲಿದ್ದು 300 ದಿನ ತೆಗೆದುಕೊಳ್ಳುತ್ತಿದ್ದ ಅನುಮೋದನೆ ಇನ್ನು ಮುಂದೆ 60- 70 ದಿನದಲ್ಲಿ ಲಭ್ಯವಾಗಲಿದೆ. ಈ ತಂತ್ರಾಂಶವನ್ನು ಮುಂಬರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಲೋಕಾರ್ಪಣೆಗೊಳಿಸಲಾಗುವುದು.


ಹೂಡಿಕೆ ಮತ್ತು ಕೈಗಾರಿಕೆ ನಿರ್ಮಾಣ ಪ್ರಕ್ರಿಯೆಯನ್ನು ಸುಗಮಗೊಳಿಸಿ ಕರ್ನಾಟಕದ ಪ್ರಗತಿಯ ವೇಗ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪಾಟೀಲ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article