ಎಡನೀರು ಶ್ರೀ ಮೇಲಿನ ದಾಳಿಗೆ ವ್ಯಾಪಕ ಖಂಡನೆ
Tuesday, November 5, 2024
ಲೋಕಬಂಧು ನ್ಯೂಸ್, ಮಂಗಳೂರು
ಕಾಸರಗೋಡು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಮೇಲಿನ ಹಲ್ಲೆ ಯತ್ನಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ವಿಶ್ವ ಹಿಂದೂ ಪರಿಷತ್ ಸೇರಿದಂತೆ ಬಜರಂಗ ದಳ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ದ. ಕ. ಜಿಲ್ಲಾ ಘಟಕ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಘಟನೆಯನ್ನು ಖಂಡಿಸಿದ್ದಾರೆ.