ಯೋಗಿಗೆ ಬೆದರಿಕೆಯೊಡ್ಡಿದ್ದ ಮಹಿಳೆ ಅರೆಸ್ಟ್
Sunday, November 3, 2024
ಲೋಕಬಂಧು ನ್ಯೂಸ್, ಮುಂಬೈ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಬಾ ಸಿದ್ದಿಕಿಯಂತೆ ಹತ್ಯೆ ಮಾಡಲಾಗುವುದಾಗಿ ಬೆದರಿಕೆ ಹಾಕಿದ್ದ ಮಹಿಳೆಯನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ.ಬಂಧಿತೆಯನ್ನು ಫಾತಿಮಾ ಖಾನ್ (24) ಎಂದು ಗುರುತಿಸಲಾಗಿದೆ.
ಆಕೆ ಮಹಾರಾಷ್ಟ್ರದ ನೆರೆಯ ಥಾಣೆ ಜಿಲ್ಲೆಯ ಉಲ್ಲಾಸ್‌ನಗರ ಪ್ರದೇಶದಲ್ಲಿ ನೆಲೆಸಿದ್ದು, ಮಾಹಿತಿ ತಂತ್ರಜ್ಞಾನ (ಐಟಿ)ದಲ್ಲಿ ಬಿಎಸ್ಸಿ ಪದವಿ ಪಡೆದಿದ್ದಾಳೆ. ಆದರೆ, ಆಕೆ ಮಾನಸಿಕ ಅಸ್ವಸ್ಥಳಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯೋಗಿ ಅವರಿಗೆ ಬೆದರಿಕೆ ಹಾಕಿರುವ ಯುವತಿ ಮಾನಸಿಕ ಅಸ್ವಸ್ಥಳಂತೆ ಕಾಣಿಸಿಕೊಳ್ಳುತ್ತಿದ್ದರೂ, ಪ್ರಕರಣವನ್ನು ಹಗುರವಾಗಿ ಪರಿಗಣಿಸುವಂತಿಲ್ಲ ಎಂದೂ ಪೊಲೀಸರು ಹೇಳಿದ್ದಾರೆ.
ಆಕೆ ಈ ಬೆದರಿಕೆ ಹಾಕುವುದರ ಹಿಂದೆ ಯಾರಾದರೂ ಇದ್ದಾರೆಯೇ, ಆಕೆಯ ಸ್ನೇಹಿತರಲ್ಲಿ ಯಾರಾದರೂ ಅನುಮಾನಾಸ್ಪದ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಯೇ ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.
ಸದ್ಯಕ್ಕೆ ಫಾತೀಮಾಳನ್ನು ಮುಂಬೈಗೆ ಕರೆತರಲಾಗಿದೆ. ಆಕೆಯ ಮಾನಸಿನ ಸಮತೋಲದ ಪರೀಕ್ಷೆ ನಡೆಸಲಾಗುತ್ತಿದೆ.