.jpg)
ಕೃಷ್ಣ ಮಠದಲ್ಲಿ ಯತಿ ಸಮಾಗಮ
Tuesday, November 5, 2024
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಮತ್ತು ತ್ರಿಚಿ ಮಹಾಸಂಸ್ಥಾನದ ಶ್ರೀ ಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಸೋಮವಾರ ಉಡುಪಿಗೆ ಆಗಮಿಸಿ ಶ್ರೀಕೃಷ್ಣ ದರ್ಶನ ಪಡೆದರು.
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಭಯ ಶ್ರೀಗಳಿಗೆ ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದರ್ಶನ ಮಾಡಿಸಿ, ಪ್ರಸಾದ ನೀಡಿದರು.
ಹರಿಹರಪುರ ಮತ್ತು ತ್ರಿಚಿ ಶ್ರೀಪಾದರು ತಮ್ಮ ಆಶೀರ್ವಚನದಲ್ಲಿ ಸರ್ವಜನೋಪಯೋಗಿಯಾದ ಕೋಟಿ ಗೀತಾ ಲೇಖನ ಯಜ್ಞ ಸಾಮಾಜಿಕ ಕ್ರಾಂತಿಯಾಗಿ ಬೆಳೆದುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರಿದ್ದರು.