
ಮಾ.1: ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಉದ್ಘಾಟನೆ
Friday, February 28, 2025
ಲೋಕಬಂಧು ನ್ಯೂಸ್
ಉಡುಪಿ, ಫೆ.27: ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಉದ್ಘಾಟನೆ ಮತ್ತು ಲೋಗೊ ಬಿಡುಗಡೆ ಕಾರ್ಯಕ್ರಮ ಮಾರ್ಚ್ 1ರಂದು ಸಂಜೆ 6.30ಕ್ಕೆ ಕಿದಿಯೂರು ಹೊಟೇಲ್ ಪವನ್ ರೂಫ್‌ಟಾಪ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ರಂಜನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಯಶಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸುವರು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಲೋಗೊ ಅನಾವರಣಗೊಳಿಸುವರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಮತ್ತಿತರರು ಪಾಲ್ಗೊಳ್ಳುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಕೆ.ಹರೀಶ್ ಕುಮಾರ್, ಪಿ.ಲಕ್ಷ್ಮೀನಾರಾಯಣ ಉಪಾಧ್ಯಾಯ, ಗಣೇಶ್ ಬೈಲೂರು, ಮಹಾಬಲೇಶ್ವರ ಭಟ್ ಇದ್ದರು.