ಸಾಕುತಂದೆ ರೂಮಿ'ಗೆ ಮುದ್ರಾಡಿ ಪ್ರಶಸ್ತಿ
Sunday, February 23, 2025
ಲೋಕಬಂಧು ನ್ಯೂಸ್
ಉಡುಪಿ, ಫೆ.23: ಆದರ್ಶ ಶಿಕ್ಷಕ, ಕವಿ, ಲೇಖಕ, ಯಕ್ಷಗಾನ ಕಲಾವಿದರಾಗಿದ್ದ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ನೀಡುವ ಸಂಸ್ಮರಣಾ ಪ್ರಶಸ್ತಿಗೆ ಬೆಂಗಳೂರಿನ ಉಪನ್ಯಾಸಕ ಎನ್.ಸಿ.ಮಹೇಶ್ ಅವರ ಸಾಕುತಂದೆ ರೂಮಿ ನಾಟಕ ಕೃತಿ ಆಯ್ಕೆಯಾಗಿದೆ.ಪ್ರಶಸ್ತಿ 15 ಸಾವಿರ ನಗದು ಮತ್ತು ಸನ್ಮಾನ ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಮಾ.27ರಂದು ನಡೆಯಲಿದೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ