ಸೇವಾ ಭೂಷಣ ಪ್ರಶಸ್ತಿಗೆ ಆಯ್ಕೆ
Sunday, February 23, 2025
ಲೋಕಬಂಧು ನ್ಯೂಸ್
ಉಡುಪಿ, ಫೆ.23: ಯಕ್ಷಗಾನ ಕಲಾರಂಗದಲ್ಲಿ ಇಪ್ಪತ್ತೇಳು ವರ್ಷ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್.ಗೋಪಾಲಕೃಷ್ಣ ನೆನಪಿನಲ್ಲಿ ಸಂಸ್ಥೆ ನೀಡುವ ಸೇವಾಭೂಷಣ ಪ್ರಶಸ್ತಿಗೆ ಈ ಬಾರಿ 25 ವರ್ಷಗಳಿಗಿಂತಲೂ ಹೆಚ್ಚು ಕಾಲ ಬಳಕೆದಾರರ ವೇದಿಕೆಯಲ್ಲಿ ಸೇವೆ ಸಲ್ಲಿಸಿದ, ಅನೇಕ ಮಂದಿ ಸಂತ್ರಸ್ತರಿಗೆ ಸೂಕ್ತ ಮಾರ್ಗದರ್ಶನ, ಬಳಕೆದಾರರಿಗಾಗಿ ಅನೇಕ ಕಮ್ಮಟ ಕಾರ್ಯಾಗಾರಗಳನ್ನು ನಡೆಸಿದ ಗ್ರಾಹಕ ಜಾಗೃತಿ ಕೃತಿಗಳನ್ನು ಹೊರತಂದಿರುವ ಕಾರ್ಪೊರೇಶನ್ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಎ. ಪದ್ಮನಾಭ ಕೊಡಂಚ ಆಯ್ಕೆಯಾಗಿದ್ದಾರೆ.ಪ್ರಶಸ್ತಿ ಪ್ರದಾನ ಸಮಾರಂಭ ಫೆ. 28ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.