
ಮಾ. 16ರಂದು 'ಮಹಾಭಿವಂದ್ಯ'
Thursday, March 13, 2025
ಲೋಕಬಂಧು ನ್ಯೂಸ್
ಉಡುಪಿ: ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯ ಬಿಲ್ಲಾಡಿ ಮತ್ತು ಯುವವಾಹಿನಿ ಉಡುಪಿ ಘಟಕ ಆಶ್ರಯದಲ್ಲಿ ಧರ್ಮಸ್ಥಳ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಮ್'ನ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಅಭಿನಂದನಾ ಕಾರ್ಯಕ್ರಮ ಮಹಾಭಿವಂದ್ಯ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ಮಾರ್ಚ್16ರ ಸಂಜೆ 4 ಗಂಟೆಗೆ ನಡೆಯಲಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ದಯಾನಂದ ಕರ್ಕೇರ, ಕಾರ್ಯಕ್ರಮವನ್ನು ಉದ್ಯಮಿ ಡಾ.ಜಿ.ಶಂಕರ್ ಉದ್ಘಾಟಿಸಲಿದ್ದಾರೆ. ಆತ್ಮಾನಂದ ಸರಸ್ವತಿ ಕಿರಿಯ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಓಬು ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ರಘುಪತಿ ಭಟ್ ಅಭಿನಂದನಾ ಮುನ್ನುಡಿಯನ್ನಾಡಲಿದ್ದಾರೆ. ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ ಅಭಿನಂದನಾರ್ಪಣೆ ಮಾಡಲಿದ್ದಾರೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಮತ್ತು ವಿನಯ್ ಕುಮಾರ್ ಸೊರಕೆ ಮೊದಲಾದವರು ಉಪಸ್ಥಿತರಿರುವರು ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಓಬು ಪೂಜಾರಿ, ರಘುನಾಥ್ ಮಾಬಿಯಾನ್, ಭಾಸ್ಕರ ಸುವರ್ಣ, ಮಹಾಬಲ ಅಮೀನ್, ನಾರಾಯಣ ಬಿ.ಎಸ್. ಉಪಸ್ಥಿತರಿದ್ದರು.