-->
20 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

20 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಲೋಕಬಂಧು ನ್ಯೂಸ್
ಪಡುಬಿದ್ರಿ: ಅದಾನಿ ಫೌಂಡೇಷನ್ ವತಿಯಿಂದ ಸ್ಥಾವರದ ಸುತ್ತಮುತ್ತಲಿನ 12 ಗ್ರಾಮ ಪಂಚಾಯತ್ ವ್ಯಾಪ್ತಿಯ 846 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 20 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು.ಇಲ್ಲಿನ ಬಂಟರ ಭವನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿದ ಅದಾನಿ ಸಮೂಹ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಅದಾನಿ ಪವರ್ ಲಿಮಿಟೆಡ್ ಅದಾನಿ ಫೌಂಡೇಷನ್ ಸಹಯೋಗದೊಂದಿಗೆ ಸಿಎಸ್ಆರ್ ಯೋಜನೆಯಡಿ ಶಿಕ್ಷಣ, ಆರೋಗ್ಯ, ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ.


2023- 24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನ ನೀಡುವ ಮುಲಕ ಗೌರವಿಸಲಾಗುತ್ತಿದೆ ಎಂದರು.


ಈ ಯೋಜನೆಯಡಿ ಪ್ರತಿವರ್ಷ ಸುಮಾರು 800 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅದಾನಿ ಉಡುಪಿ ಸ್ಥಾವರದ ಒಟ್ಟು ಸಿಎಸ್ಆರ್ ಅನುದಾನದಲ್ಲಿ ಶೇ. 16%ರಷ್ಟು ಶಿಕ್ಷಣ ಕ್ಷೇತ್ರಕ್ಕೆ ವ್ಯಯಿಸಲಾಗುತ್ತಿದೆ ಎಂದು ಆಳ್ವ ಹೇಳಿದರು.


ಶಾಸಕ ಗುರ್ಮೆ ಸುರೇಶ ಶೆಟ್ಟಿ, ಎಲ್ಲೂರು ಗ್ರಾ.ಪಂ. ಅಧ್ಯಕ್ಷ ರವಿರಾಜ್ ರಾವ್, ಬೆಳಪು ಗ್ರಾ. ಪಂ. ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ, ಬಡಾ ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್ ಮೆಂಡನ್, ಬಳ್ಕುಂಜೆ ಗ್ರಾ.ಪಂ. ಅಧ್ಯಕ್ಷೆ ಮಮತಾ ದಿವಾಕರ್ ಪೂಂಜಾ, ಮಜೂರು ಗ್ರಾ.ಪಂ. ಅಧ್ಯಕ್ಷ ಪ್ರಸಾದ್ ಶೆಟ್ಟಿ, ಕುತ್ಯಾರು ಗ್ರಾ.ಪಂ. ಅಧ್ಯಕ್ಷ ಜನಾರ್ದನ ಆಚಾರ್ಯ, ತೆಂಕ ಗ್ರಾ.ಪಂ. ಅಧ್ಯಕ್ಷೆ ಸುರೇಖ, ಪಲಿಮಾರು ಗ್ರಾ.ಪಂ. ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ ಮತ್ತು ಪಡುಬಿದ್ರಿ ಗ್ರಾ.ಪಂ. ಉಪಾಧ್ಯಕ್ಷ ಹೇಮಚಂದ್ರ ಸಾಲಿಯನ್ ಇದ್ದರು.


ಯುಪಿಸಿಎಲ್ ಕಂಪನಿಯ ಎಜಿಎಂ ರವಿ ಆರ್. ಜೇರೆ ಸ್ವಾಗತಿಸಿ, ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿ, ವಂದಿಸಿದರು. ಸಿಬಂದಿಗಳಾದ ಅನುದೀಪ್, ಶುಭಮಂಗಳ, ಯಶವಂತ್ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article