-->
ಅನುದಾನ ನೀಡದ ಸರ್ಕಾರದ ವಿರುದ್ಧ ಮಾ.31ರಂದು ಪ್ರತಿಭಟನೆ

ಅನುದಾನ ನೀಡದ ಸರ್ಕಾರದ ವಿರುದ್ಧ ಮಾ.31ರಂದು ಪ್ರತಿಭಟನೆ

ಲೋಕಬಂಧು ನ್ಯೂಸ್
ಉಡುಪಿ: ರಾಜ್ಯ ಸರಕಾರದ 2025- 26ನೇ ಸಾಲಿನ ಬಜೆಟ್‌ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಶಾಸಕ ಯಶಪಾಲ್ ಸುವರ್ಣ ಮನವಿ ನೀಡಿದ್ದರೂ, ಸಿಎಂ ವಿಶೇಷ ಅನುದಾನ ನೀಡದಿರುವುದನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ಮಾ.31ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್ ವರೆಗೆ ಬೃಹತ್ ಪಾದಯಾತ್ರೆ ಬಳಿಕ ಪ್ರತಿಭಟನೆ ನಡೆಯಲಿದೆ.ಶನಿವಾರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಾದಯಾತ್ರೆ ಬಳಿಕ ಪಾರ್ಕಿಂಗ್ ಪ್ರದೇಶದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲೆಯ ಐವರು ಶಾಸಕರು, ಜಿಲ್ಲಾಧ್ಯಕ್ಷ ಸೇರಿದಂತೆ ವಿವಿಧ ಸ್ತರದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.


ಸರಕಾರಿ ಶಾಲೆಗಳ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಮಾಡಿಲ್ಲ. ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಪೂರಕವಾದ ಹೆಚ್ಚುವರಿ ಅನುದಾನ ನೀಡದೇ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ವಹಣೆಗೆ ಅನುದಾನ ನೀಡದೇ ಬಡವರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.


ಸುದ್ದಿಗೋಷ್ಠಿಯಲ್ಲಿ ನಗರ ಅಧ್ಯಕ್ಷ ದಿನೇಶ್ ಆಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು ಮತ್ತು ರಶ್ಮಿ ಬಿ. ಶೆಟ್ಟಿ, ನಗರ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್ ಇದ್ದರು.

Ads on article

Advertise in articles 1

advertising articles 2

Advertise under the article