ಸಂಜಯ ಗುರುರಾಜ್'ಗೆ ಪ್ರಶಸ್ತಿ
Wednesday, March 12, 2025
ಲೋಕಬಂಧು ನ್ಯೂಸ್
ಉಡುಪಿ: ಅಮೆರಿಕಾ ನ್ಯೂಜರ್ಸಿಯಲ್ಲಿರುವ ಪುತ್ತಿಗೆ ಮಠದ ಶ್ರೀಕೃಷ್ಣ ಮಂದಿರದ ನಿರ್ಮಾಣದಲ್ಲಿ ಇಂಜಿನಿಯರ್ ಆಗಿ ಸಹಕಾರ ನೀಡಿದ್ದ ಸಂಜಯ ಗುರುರಾಜ ಅವರನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಿ ಅನುಗ್ರಹಿಸಿದರು.ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ವಿದೇಶ ವ್ಯವಹಾರಗಳ ಕಾರ್ಯದರ್ಶಿ ಪ್ರಸನ್ನಾಚಾರ್ಯ ಇದ್ದರು.